Site icon Suddi Belthangady

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಇಂದಬೆಟ್ಟು: ಗ್ರಾಮ ಪಂಚಾಯತ್ ಇಂದಬೆಟ್ಟು ಇದರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ವ್ಯವಸ್ಥಾಪಕರಾದ ರಾಮಚಂದ್ರ ರವರು ಶಿಬಿರದ ಬಗ್ಗೆ ಮಾಹಿತಿ ನೀಡಿದರು.ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಅನಂದ ಅಡಿಲು, ಕಾರ್ಯದರ್ಶಿ ಗಿರಿಯಪ್ಪ ಗೌಡ, ಪಂಚಾಯತ್ ಸಿಬ್ಬಂದಿ ವರ್ಗದವರು, ನ್ಯೂ ವಿಷನ್ ಜನರೇಶನ್ ನ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು ರವರು ಸ್ವಾಗತಿಸಿ, ವಂದಿಸಿದರು.

Exit mobile version