ಜ.31-ಫೆ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

0

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹತ್ಯಡ್ಕದಲ್ಲಿ ಬ್ರಹ್ಮಶ್ರೀ ವೇ.ಮೂ.ಮೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ.1ರಂದು ಜರುಗಲಿದೆ.

ಜ.31ರಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ಮಹಾಪೂಜೆ, ಸಾಯಂಕಾಲ ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಂಜೆ ರಂಗಪೂಜೆ ನಡೆಯಿತು.

ಫೆ.1ರಂದು ಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ಸಂಜೆ ಉತ್ಸವ, ಬಲಿ ಕಟ್ಟೆ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here