ಮಲವಂತಿಗೆ: ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಮಲವಂತಿಗೆ ಇದರ ಮಹಾಸಭೆಯು ಜ.30ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯ ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಂಜೀವಿನಿ ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು.ಉದ್ಘಾಟನೆಯನ್ನು ನೆರವೇರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಒಕ್ಕೂಟವನ್ನು ಮತ್ತು ಸ್ತ್ರೀಶಕ್ತಿಯನ್ನು ಉದ್ದೇಶಿಸಿ ಮಾತನಾಡಿದರು.ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಹಾರೈಸಿದರು.ವಲಯ ಮೇಲ್ವಿಚಾರಕರಾದ ಜಯಾನಂದ ಸಂಜೀವಿನಿಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು.
ನೂತನ ಪದಾಧಿಕಾರಿಯವರನ್ನು ಒಕ್ಕೂಟದ ಅಧ್ಯಕ್ಷರು ಹೂವು ನೀಡುವುದರ ಮೂಲಕ ಸ್ವಾಗತಿಸಿಕೊಂಡರು.ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು.ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಗೆ ನೀಡುವುದರ ಮೂಲಕ ಅಭಿನಂದಿಸಲಾಯಿತು.ಎಂಬಿಕೆ ರೇಖಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಎಲ್ ಸಿ ಆರ್ ಪಿ ವಿನೋದ ಇವರು ಪ್ರಾರ್ಥನೆಯನ್ನು ಹಾಡಿದರು.ವೇದಿಕೆಯಲ್ಲಿದ್ದ ಗಣ್ಯರನ್ನು ಪಶು ಸಖಿ ಪವಿತ್ರ ಇವರು ಸ್ವಾಗತಿಸಿದರು.ಎನ್ ಸಿ ಆರ್ ಪಿ ಪೂರ್ಣಿಮಾ ಇವರು ವರದಿ ಮಂಡಿಸಿದರು.