ವೇಣೂರು : ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾ ಮಸ್ತಕಾಭಿಷೇಕ ಮಹೋತ್ಸವ 2024 ಫೆ.22ರಿಂದ ಮಾ.1ರ ವರೆಗೆ ನಡೆಯಲಿದೆ.
ಇದರ ಅಂಗವಾಗಿ ಜ.31ರಂದು ವೇಣೂರು ಬಾಹುಬಲಿ ಸಭಾಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ಹಾಗೂ ಪ್ರಗತಿ ಪರಿಶೀಲನೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನ್ವಿಕ್, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್, ಬಾಹುಬಲಿ ಮಹಾ ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣಚಂದ್ರ ಇಂದ್ರ, ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
ಸಮನ್ವಯಧಿಕಾರಿ ಡಾ.ಜಯಕೀರ್ತಿ ಜೈನ್ ಸ್ವಾಗತಿಸಿದರು
p>