ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ಭವಿಷ್ಯದ ಭಾರತದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರಗಿತು.
ಮುಖ್ಯ ಅತಿಥಿಯಾಗಿ ಪೃಥ್ವೀಶ ಧರ್ಮಸ್ಥಳ (ಯುವ ವಕೀಲರು) ಭಾಗವಹಿಸಿ, ವಿವೇಕಾನಂದರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಯುವ ಜನತೆ ಭವಿಷ್ಯದ ಬಗ್ಗೆ ದೇಶಪ್ರೇಮದಿಂದ ಒಗ್ಗೂಡಿ ಭವ್ಯ ಭಾರತಕ್ಕೆ ಸಹಕಾರಿಯಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಸಂತೋಷ ಇವರು ವಹಿಸಿದ್ದರು.ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
p>