Site icon Suddi Belthangady

ಉಜಿರೆ: ಶ್ರೀ ಧ.ಮ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಗಾರ

ಉಜಿರೆ: ಶ್ರೀ ಧ.ಮ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ಶಿಕ್ಷಕರ ಸಂಘ ಸಹಯೋಗದಲ್ಲಿ ಒಂದು ದಿನದ ಹೂಡಿಕೆದಾರರ ಜಾಗೃತಿ ಕಾರ್ಯಗಾರವನ್ನು (investors awareness program) ಜ.30ರಂದು ಶ್ರೀ ಧ.ಮ ಪ್ರಕೃತಿ ಚಿಕಿತ್ಸೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಬಿ.ಎ.ಕುಮಾರ್ ಹೆಗ್ಡೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಪ್ರೊ.ಮನೋಜ್ ಲೂಯಿಸ್ ಹೂಡಿಕೆಯ ಮಹತ್ವ, ಯೋಜನೆ ಹಾಗೂ ಉಪಯೋಗದ ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಫ್ರಾಂಕ್ ಕ್ಲಿನ್ ಟೆಂಪ್ಲೇಟನ್ ಅಸೆಟ್ ಮ್ಯಾನೇಜ್ಮೆಂಟ್ ಪ್ರೈ.ಲಿ. ಮಂಗಳೂರು ಇದರ ಶಾಖ ವ್ಯವಸ್ಥಾಪಕ ಲಿಯೋ ಅಮಲ್ ಹಾಗೂ ಹೂಡಿಕೆ ಸೇವೆಗಳ ವೃತ್ತಿಪರ ಪರಿಣಿತೆ ಸಪ್ನ ಶೇನೊಯ್ ಆಗಮಿಸಿದ್ದರು.ವಾಣಿಜ್ಯ ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲಿಯೇ ಹೂಡಿಕೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಎರಡು ಹಂತದಲ್ಲಿ ಕಾರ್ಯಗಾರ ನಡೆದಿದ್ದು, ಬೆಳಗ್ಗಿನ ಅವಧಿ ಅಂತಿಮ ವಾಣಿಜ್ಯ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಮಧ್ಯಾಹ್ನ ನಂತರದ ಅವಧಿ ದ್ವಿತೀಯ ವಾಣಿಜ್ಯ ಪದವಿ ವಿದ್ಯಾರ್ಥಿಗಳಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಡೀನ್ ಶಕುಂತಲಾ, ವಿಭಾಗ ಮುಖ್ಯಸ್ಥೆ ಡಾ.ರತ್ನಾವತಿ, ಕಾರ್ಯಕ್ರಮ ಸಂಯೋಜಕರಾದ ಮಾಲಿನಿ, ಪ್ರಸಾದ್ ಕುಮಾರ್, ವಿಭಾಗದ ಇತರ ಸಹಾಯಕ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮ ನಿರೂಪಣೆಯನ್ನು ತೃತೀಯ ವಾಣಿಜ್ಯ ವಿದ್ಯಾರ್ಥಿನಿ ಜೆನಿಫರ್ ನಿರ್ವಹಿಸಿದರು.ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ದೀಕ್ಷಿತ ಸ್ವಾಗತಿಸಿ, ಅಶ್ವಿನಿ ವಂದಿಸಿದರು.

Exit mobile version