ಧರ್ಮಸ್ಥಳ: ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.01ರಂದು ತೋರಣ ಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಪೂಜ್ಯ ದಿವ್ಯಸಾಗರ ಮುನಿಮಹಾರಾಜರು, ಪೂಜ್ಯ ಆದಿಸಾಗರ ಮುನಿಮಹಾರಾಜರು, ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇಂದು ಪಾದಾಭಿಷೇಕ: ಇಂದು(ಫೆ.02) ಶುಕ್ರವಾರ ಬೆಳಿಗ್ಗೆ ಗಂಟೆ 8.30ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
p>