Site icon Suddi Belthangady

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ 

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021-22ನೇ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಒಟ್ಟು ಐವತ್ತು  ಸಂಸ್ಕೃತ  ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಬಂದಿದ್ದು,  ಒಟ್ಟು ಮೂರು ಲಕ್ಷ ರೂಪಾಯಿಗಳಷ್ಟು  ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್  ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Exit mobile version