Site icon Suddi Belthangady

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ.3ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ವಠಾರದಲ್ಲಿ ಜರಗಿತು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇರರಿ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷೆ ವಸಂತಿ, ನಿಕಟಪೂರ್ವ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ ಪಂಚಾಯತ್, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಸಂತೋಷ ಜೈನ್, ಪಂಚಾಯತ್ ಸದಸ್ಯರು, ಪಡಂಗಡಿ ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು.ಕಾರ್ಯದರ್ಶಿ ತಾರನಾಥ ನಾಯ್ಕ ಅನುಪಾಲನಾ ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು.ಪಂಚಾಯತ್ ವ್ಯಾಪ್ತಿಯ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.

ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

Exit mobile version