ಕಳೆಂಜ: ಜ.31ರಂದು ಕಳೆಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಮಂಜುನಾಥ್.ಹೆಚ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ, ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ ಉಪಸ್ಥಿತರಿದ್ದರು.
ಸಭೆಯು ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಪಂಚಾಯತ್ ನ ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಅವರು ವಿಕಲಚೇತನರ ಇಲಾಖೆಯ ವಿವಿಧ ಯೋಜನಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ವಿಕಲಚೇತನರು ತಮಗೆ ಅವಶ್ಯಕತೆಯಿರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ LIC ಅಭಿವೃದ್ಧಿ ಅಧಿಕಾರಿ ವಿನಯ್ ಕುಮಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದು, ವಿಕಲಚೇತನರು ಹಾಗೂ ಇತರರಿಗೆ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ, ವಿಮಾ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.ಸಭೆಯಲ್ಲಿ ಹೆಚ್ಚಿನ ವಿಕಲಚೇತನರು ಹಾಗೂ ಆರೈಕೆದಾರರು ಭಾಗವಹಿಸಿ ತಮ್ಮ ಬೇಡಿಕೆಗಳು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ. ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲಾ ಎನ್ ವರದಿ ವಾಚಿಸಿದರು.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ ಅವರು ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗದವರು ಸಹಕರಿಸಿದರು.