ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆಯಲ್ಲಿ ಫೆ.3 ರಂದು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ವಲಯ ಅರಣ್ಯಾಧಿಕಾರಿ ವಿದ್ಯಾ ರವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.
ಕಂದಾಯ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಮೆಸ್ಕಾಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಇಂಜಿನಿಯರಿಂಗ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತ್ ಉಪಾಧ್ಯಕ್ಷೆ ಇಂದಿರಾ ಬಿ., ಗ್ರಾ.ಪ್ರಂ ಸದ್ಯಸರುಗಳಾದ ಶುಭಾಷಿನಿ ಗೌಡ, ಇಸ್ಮಾಯಿಲ್, ಶಕುಂತಲಾ, ಹರೀಶ್, ಮರಿಟಾ ಪಿಂಟೋ, ಕುಸುಮಾ, ಮೋಹಿನಿ ಶ್ವೇತಾ, ಸುಧಾಕರ, ಯಶೋಧರ, ಲತೀಫ್, ಪುಷ್ಪಲತಾ, ವಿಜಯ ಗೌಡ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.ಗ್ರಾ.ಪಂ ಪಿ.ಡಿ.ಓ.ಸಂತೋಷ್ ಪಾಟೀಲ್ ಸ್ವಾಗತಿಸಿದರು.ಗ್ರಾ.ಪಂಕಾರ್ಯದರ್ಶಿ ಕುಂಞ.ಕೆ. ಸಿಬ್ಬಂದಿಗಳು ಸಹಕರಿಸಿದರು.