ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಕಾರದಲ್ಲಿ – ಹಳೆ ಪೇಟೆ ಸ. ಹಿ.ಪ್ರಾ ಶಾಲೆಯಲ್ಲಿ ನಮ್ಮೂರ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

0

ಉಜಿರೆ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಮತ್ತು ವಿವಿಧ ಸಂಘಟನೆಗಳ ಸಹಕಾರದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮದಡಿಯಲ್ಲಿ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿಗೆ ಫೆ.4 ರಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಚಾಲನೆ ನೀಡಿದರು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಮಾಜಿ ಅಧ್ಯಕ್ಷ ವಕೀಲ ಧನಂಜಯ ಕುಮಾರ್ ಬಿ. ಕೆ., ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ಧನ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ,ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನಾದ ಅಧ್ಯಕ್ಷ ಸಂಪತ್ ಸುವರ್ಣ, ತಾ. ಪ. ಮಾಜಿ ಸದಸ್ಯ ಶಶಿಧರ ನಿಡಿಗಲ್, ಪ್ರಮುಖ ರಾದ ಜಯಶಂಕರ್ ಶರ್ಮ, ಅರುಣ್ ಕುಮಾರ್, ರಾಜೇಶ್ ಪೈ, ಪ್ರಭಾಕರ ಹೆಗ್ಡೆ, ಪ್ರಶಾಂತ್ ಜೈನ್, ಶ್ರೀಧರ್ ಕೆ. ವಿ., ಪ್ರಸಾದ್ ಬಿ. ಎಸ್. ಜಯಂತ ಶೆಟ್ಟಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಬುಬಕ್ಕರ್, ಮುಖ್ಯ ಶಿಕ್ಷಕಿ ಸಾವಿತ್ರಿ, ಎಸ್ ಡಿ ಎಂ ಕಾಲೇಜು ಕ್ರೀಡಾ ಮತ್ತು, ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು, ಲಕ್ಶ್ಮೀ ಗ್ರೂಪ್ ಇಂಡಸ್ಟ್ರಿ ಯ ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಉಜಿರೆ । ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಜರೆ | ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಉಜಿರೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮ್ಹಾಲಕರ ಸಂಘ , ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ಬೆಳ್ತಂಗಡಿ ವಲಯ ಎಸ್.ಡಿ.ಎಂ. ಸ್ಪೋಟ್ಸ್ ಕ್ಲಬ್ ಉಜಿರೆ ರಾಜಸ್ಥಾನ ವಿಷ್ಣು ಸಮಾಜ ಉಜರೆ ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ ಉಜಿರೆ,ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಶ್ರೀ ಧ.ಮಂ. ಕಾಲೇಜು, ಉಜಿರೆ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ನೇಕಾರಪೇಟೆ, ಉಜಿರೆ . ಮಿತ್ರ ಯುವಕ ಮಂಡಲ, ಅರಳಿ ಮೊದಲಾದ ಸಂಘ ಸಂಸ್ಥೆಗಳು ಸಹಕಾರ ನೀಡಿದರು

LEAVE A REPLY

Please enter your comment!
Please enter your name here