ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

0

ಧರ್ಮಸ್ಥಳ: ಪೊಲೀಸರು ಧರ್ಮಸ್ಥಳ ಬಸ್ ಸ್ಟ್ಯಾಂಡ್ನಲ್ಲಿ ಐದು ಜನ ಆರೋಪಿಗಳು ಅಕ್ರಮವಾಗಿ 42 ಮೊಬೈಲ್ ಸಿಮ್ ಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ಸಂಖ್ಯೆ 5 /2024 ರಂತೆ ಎಪ್. ಐ.ಆರ್ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು.

ನ್ಯಾಯಾಲಯಕ್ಕೆ ಆರೋಪಿಗಳ ಪರ ವಕೀಲರು ಒಬ್ಬ ವ್ಯಕ್ತಿಯು ಕಾನೂನು ರೀತಿಯಲ್ಲಿ 9 ಸಿಮ್ ಕಾರ್ಡ್ ಗಳನ್ನು ಹೊಂದಬಹುದು ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದು, ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯವು ಧರ್ಮಸ್ಥಳ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಮೇಲ್ನೋಟಕ್ಕೆ ಯಾವುದೇ ಸತ್ಯ ಸತ್ಯತೆಗಳು ಇಲ್ಲದಿರುವ ಕಾರಣ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್(ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

p>

LEAVE A REPLY

Please enter your comment!
Please enter your name here