ಬಳಂಜ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

0

ಬಳಂಜ: ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.5ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಕಂದಾಯ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮದ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಿತು.

ಗ್ರಾ.ಪಂ. ಉಪಾಧ್ಯಕ್ಷ ಶಶಿಧರ್ ಶೆಟ್ಟಿ ಹಾಗೂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಗಣೇಶ್ ಶೆಟ್ಟಿ ಸ್ವಾಗತಿಸಿದರು.ಕಾರ್ಯದರ್ಶಿ, ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here