ಬೆಳ್ತಂಗಡಿ: ದಕ್ಷಿಣ ಕನ್ನಡ ರೂರಲ್ ಡೆವೆಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಸರಕಾರಿ ಪ್ರೌಢಶಾಲೆ ಶಾಲೆತ್ತಡ್ಕ ಇವುಗಳ ಸಹಭಾಗಿತ್ವದಲ್ಲಿ ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯು ಫೆ.5 ರಂದು ನಡೆಯಿತು.
ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಿಖಿತಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಯೋಜನೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಪ್ರಾಸ್ತಾವಿಕವಾಗಿ ಮಾತನಾಡಿ ಡಿ.ಕೆ.ಅರ್.ಡಿ.ಎಸ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳು ಹಾಗೂ ವಿಶ್ವ ಕ್ಯಾನ್ಸರ್ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಶೆಟ್ಟಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲೆತ್ತಡ್ಕ ಸರಕಾರಿ ಶಾಲೆಯ ಶಿಕ್ಷಕರಾದ ಸುಧೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಪ್ರೌಢಶಾಲೆಯ ಶಿಕ್ಷಕರಾದ ಸುಖಾನಂದ್ ಎಲ್ಲರಿಗೂ ಸ್ವಾಗತ ಕೋರಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಒಟ್ಟು 62 ಮಂದಿ ವಿದ್ಯಾರ್ಥಿಗಳು ಈ ಕಾರ್ಯಗಾರದ ಪ್ರಯೋಜನ ಪಡೆದರು.