Site icon Suddi Belthangady

ಬೆಳ್ತಂಗಡಿಯ ಶೋಭಾ ಪುತ್ತೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಗಡಾಜೆಯಲ್ಲಿ ನವವಿವಾಹಿತೆಯೋರ್ವರು ಫೆ.4ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಶೋಭಾ (26ವ) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡವರು. ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಕುರಿಯದ ಗಡಾಜೆ ರೋಹಿತ್ ರವರೊಂದಿಗೆ ವಿವಾಹ ನಡದಿತ್ತು.

ಈಕೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ. ಕುರಿಯ ಗಡಾಜೆಯ ಗಂಡನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version