ಉಜಿರೆ :ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರೆ ಫೆ.12 ರಂದು ಆಲಂಬಾಡಿ ಪದ್ಮನಾಭಾ ತಂತ್ರಿಯವರ ನೇತೃತ್ವದಲ್ಲಿ ಉಜಿರೆ ಶರತ್ ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಗಣಪತಿ ಹೋಮ, ಬಿಂಬ ಶುದ್ಧಿ, ಪುಣ್ಯಾಹ ಕಲಶ, ಕಲಶ ಪೂಜೆ, ಕಲಶಾಭಿಷೇಕ, ಶ್ರೀ ಸುಬ್ರಮಣ್ಯ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಸಿಯಾಳಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಕಾರ್ತಿಕ ಪೂಜೆ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಕುಣಿತ ಭಜನೆ, ಕಾಳರಾತ್ರಿ ದೈವದ ಪರ್ವ, ಭಂಡಾರ ಆಗಮನ, ರಂಗ ಪೂಜೆ, ಬಳಿಕ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ತುಳು ಹಾಸ್ಯಮಯ ನಾಟಕ “ಅಮ್ಮೆರ್” ಪ್ರದರ್ಶನಗೊಳ್ಳಲಿದೆ.ರಾತ್ರಿ ಕಾಳರಾತ್ರಿ ದೈವದ ನೇಮ ನಡೆಯಲಿದೆ.