ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಅಧ್ಯಕ್ಷತೆಯಲ್ಲಿ ಫೆ.06 ರಂದು ನಡ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ತಾಲೂಕು ಪಶುಸಂಗೋಪನೆ ವೈದ್ಯಾಧಿಕಾರಿ ಮಂಜನಾಯ್ಕ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್, ಗ್ರಾ.ಪಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂ ಪಿ.ಡಿ.ಓ.ಶ್ರೀನಿವಾಸ್ ಸ್ವಾಗತಿಸಿ, ಗ್ರಾ.ಪಂ ಕಾರ್ಯದರ್ಶಿ ಕಿರಣ್ ವರದಿ ಮಂಡಿಸಿ, ಸಿಬ್ಬಂದಿ ಭಾರತಿ ಜಮಾ ಖರ್ಚಿನ ಬಗ್ಗೆ ತಿಳಿಸಿದರು.
p>