ಹೊಸಂಗಡಿ: ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ಮೂಲಕ ಫೆ.6ರಂದು ತಾಲೂಕಿಗೆ ಆಗಮಿಸಿತು.
ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಉಪಾಧ್ಯಕ್ಷೆ ಶಾಂತಾ, ಸದಸ್ಯರುಗಳು, ತಾಲೂಕು ದಂಡಾಧಿಕಾರಿ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ತಾಲೂಕು ಶಿಕ್ಷಣಾಧಿಕಾರಿ ತಾರಕೇಶ್ವರಿ, ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಸಂಪನ್ಮೂಲ ವ್ಯಕ್ತಿ ಲೇಖಕ ಅರವಿಂದ್ ಚೊಕ್ಕಾಡಿ, ಹೊಸಂಗಡಿ ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲ ಶ್ರೀಧರ ಶೆಟ್ಟಿ, ಮುಂಡಾಜೆ ವಸತಿ ಶಾಲೆಯ ಪ್ರಾಂಶುಪಾಲರು, ಸಂಜೀವಿನಿ ಮಹಿಳಾ ಒಕ್ಕೂಟದ ತಾಲೂಕು ಸಂಯೋಜಕಿ ಪ್ರತೀಮಾ, ಮಹಿಳಾ ಮತ್ತು ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಗುಲಾಬಿ, ನರೇಗಾ ತಾಲೂಕು ಐಇಸಿ ಸಂಯೋಜಕಿ ವಿನಿಷಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹೇಮಾ ವಸಂತ್, ಗ್ರಾಮ ಪಂಚಾಯತ್ ನಸದಸ್ಯರು, ತಾಲೂಕು ವಿವಿಧ ಸಂಘಟನೆಗಳ ಮುಖಂಡರು, ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷ, ಎಲ್ ಸಿ ಆರ್ ಪಿ, ಎಮ್ ಬಿ ಕೆ, ಸದಸ್ಯರು, ಗ್ರಾಮದ ಗಣ್ಯರು, ವಿವಿಧ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಇಂದಿರಾ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ಅರವಿಂದ ಚೊಕ್ಕಾಡಿ ಸಂವಿಧಾನದ ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡಿದರು.ತಾಲೂಕು ತಹಶೀಲ್ದಾರರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು.ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.
ಪಂ.ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.