

ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮರೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾವು ಮರೋಡಿ ಗ್ರಾಮ ಪಂಚಾಯತಿಗೆ ಆಗಮಿಸಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣಾನ್ ಇವರು ಹೂ ಮಾಲೆ ಹಾಕುವ ಮುಖಾಂತರ ಜಾಥಾವನ್ನು ಸ್ವಾಗತಿಸಿದರು.ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮಶ್ರೀ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಯಶೋಧಾ, ಹೊಸಂಗಡಿ ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಮುಂಡಾಜೆ ವಸತಿ ಶಾಲೆಯ ಪ್ರಾಂಶುಪಾಲರು, ಮಾವಿನಕಟ್ಟೆ ಮತ್ತು ಮರೋಡಿ ಶಾಲೆಯ ಮುಖ್ಯೋಪಾಧ್ಯಾಯರು, ನರೇಗಾ ತಾಲೂಕು ಐಇಸಿ ಸಂಯೋಜಕರಾದ ವಿನಿಷಾ, ತಾಲೂಕು ವಿವಿಧ ಸಂಘಟನೆಗಳ ಮುಖಂಡರು, ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷರಾದ ವನಿತಾ, .ಎಲ್ ಸಿ ಆರ್ ಪಿ, ಎಮ್ ಬಿ ಕೆ. ಸದಸ್ಯರು, ಗ್ರಾಮದ ಗಣ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್ ಇವರು ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು.
ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಬಹುಮಾನ ನೀಡಿ ಅಭಿನಂದಿಸಿದರು.ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು. ಡಾ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಇವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.