







ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಶಾರದ ಇವರ ಅಧ್ಯಕ್ಷತೆಯಲ್ಲಿ ಫೆ.07 ರಂದು ಗ್ರಾ.ಪಂ ಸಭಾಭವನ ಚಾರ್ಮಾಡಿಯಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ಸಹಾಯಕ ನಿರ್ದೇಶಕ ಜೋಸೆಫ್ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.


ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೀಲು, ಗ್ರಾ.ಪ್ರಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂ ಪಿ.ಡಿ.ಓ. ಪುರುಷೋತ್ತಮ ಜಿ ಸ್ವಾಗತಿಸಿ, ಗ್ರಾ.ಪಂ.ಕಾರ್ಯದರ್ಶಿ ಕುಂಜ್ಞ ವರದಿ ಮಂಡಿಸಿದರು.ಸಿಬ್ಬಂದಿಗಳು ಸಹಕರಿಸಿದರು.








