ಬೆಳಾಲು: ಮಕ್ಕಳ ಗ್ರಾಮ ಸಭೆ

0

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಫೆ. 7ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಪೆರಿಯಡ್ಕ ಸರಕಾರಿ ಹಿ.ಪ್ರಾ.ಶಾಲಾ ವಿದ್ಯಾರ್ಥಿನಿ ಆದ್ಯ ಅಧ್ಯಕ್ಷತೆ ವಹಿಸಿದ್ದರು.ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಕಾರ್ಯಕ್ರಮ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಂಚಾಯತ್ ಸದಸ್ಯರಾದ ಸತೀಶ್ ಎಳ್ಳುಗದ್ದೆ, ಕೃಷ್ಣಯ್ಯ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕರಿ ಲಕ್ಶ್ಮೀಬಾಯಿ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ, ಸಿಆರ್ ಪಿ ಪ್ರತಿಮಾ ಇಲಾಖೆಯ ಮಾಹಿತಿ ನೀಡಿದರು.

ಶ್ರೀ ಧ. ಮ. ಪ್ರೌಢ ಶಾಲಾ ವಿದ್ಯಾರ್ಥಿನಿ ಇಂದುಮತಿ ಸ್ವಾಗತಿಸಿ, ಕೊಲ್ಪಾಡಿ ಕಿ.ಪ್ರಾ.ಶಾಲಾ ವಿದ್ಯಾರ್ಥಿನಿ ತನಿಷ್ಕ ವಂದಿಸಿದರು.ಶ್ರೀ ಸರಸ್ವತಿ ಹಿ.ಪ್ರಾ.ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ವ್ಯಾಪ್ತಿಯ ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here