Site icon Suddi Belthangady

ಫೆ.11:ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿಹಬ್ಬದ ಸಂಭ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ, ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ಭಾಗಿ

ಬೆಳ್ತಂಗಡಿ: ಕರ್ನಾಟಕ ಪ್ರಥಮ ಸಿರೋ ಮಲಬಾರ್ ಧರ್ಮಪ್ರಾಂತ್ಯ ಬೆಳ್ತಂಗಡಿಯ ಸ್ಥಾಪನೆ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪ.ಪೂ.ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷ ದೀಕ್ಷೆಯ ರಜತ ಮಹೋತ್ಸವ ಫೆ.11 ರಂದು ನಡೆಯಲಿದೆ ಎಂದು ಧರ್ಮಪ್ರಾಂತ್ಯದ ಪಿ.ಆರ್.ಒ ಫಾ.ಟೋಮಿ ಕಲ್ಲಿಕಟ್ ಹೇಳಿದರು.

ಅವರು ಫೆ.9 ರಂದು ಧರ್ಮಾಪ್ರಾಂತ್ಯದ ಜ್ಞಾನನಿಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಅಂದು ಬೆಳಿಗ್ಗೆ ಕರ್ನಾಟಕ, ಕೇರಳದಿಂದ ಶ್ರೇಷ್ಠ ಮಹಾ ಧರ್ಮಾಧ್ಯಕ್ಷರುಗಳು, ಧರ್ಮಾಧ್ಯಕ್ಷರುಗಳು, ಧರ್ಮಗುರುಗಳು, ಧರ್ಮ ಭಗಿಣಿಯರು ದಿವ್ಯ ಬಲಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ನಡೆಯುವ ರಜತ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಕರ್ನಾಟಕ ವಿಧಾನ ಸೌಧದಸಭಾಪತಿ ಯು.ಟಿ.ಖಾದರ್, ಇಂದನ ಸಚಿವ ಹಾಗೂ ಕರ್ನಾಟಕ ಸರಕಾರದ ಕ್ರೈಸ್ತ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಜೆ.ಜೋರ್ಜ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಹಾಗೂ ಇತರ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸೀರಿಯಾನ್ ಕಥೋಲಿಕ್ ಕ್ರೈಸ್ತರ ಆದ್ಯಾತ್ಮಿಕ ಅವಶ್ಯಕತೆಗಳಿಗಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ 1999 ಏಪ್ರಿಲ್ 24 ರಂದು ಪ್ರಾರಂಭಗೊಂಡು ಅದೇ ದಿನ ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ನೇಮಕಗೊಂಡರು.ಕಳೆದ 25 ವರ್ಷಗಳಿಂದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಧರ್ಮಾಪ್ರಾಂತ್ಯದ ವಿಕಾರ್ ಜನರಲ್ ಫಾ.ಜೋಸ್ ವಲಿಯ ಪರಂಬಿಲ್, ಮೀಡಿಯಾ ಸಂಚಾಲಕ ಫಾ.ಸುನೀಲ್ ಉಪಸ್ಥಿತರಿದ್ದರು.

Exit mobile version