ವೇಣೂರು: ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ವೇಣೂರು ಇವರ ಸಂಯುಕ್ತ ಆಶ್ರಯದಲ್ಲಿ ಫೆ.8ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ನಡೆಯಿತು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ವೇಣೂರು ಹೊಸ ಬಸ್ಸು ತಂಗುದಾಣದವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ.ಡಿ, ಪಂಚಾಯತ್ ಸದಸ್ಯರುಗಳು, ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿಧ್ಯಾರ್ಥಿಗಳ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು.ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ ಇವರು ಸ್ವಾಗತಿಸಿದರು.ಪಂಚಾಯತ್ ಕಾರ್ಯದರ್ಶಿ ವನಜ ನಾಡಗೀತೆಯನ್ನು ಹಾಡಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ರವರು ಸಂವಿಧಾನ ಪೀಠಿಕೆ ಭೋದನೆ ಮಾಡಿದರು.ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಮೂಡಿಸುವ ನಾಟಕ ಪ್ರದರ್ಶಿಸಿದರು.ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಐಇಸಿ ಸಂಯೋಜಕರಾದ ವಿನಿಷ, ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ತುಲಪುಳೆ, ಪ್ರೌಢ ಶಾಲಾ ವಿಭಾಗದ ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.ಪಂಚಾಯತ್ ಗುಮಾಸ್ತ ನಾರ್ಣಪ್ಪ ಗೌಡ ವಂದಿಸಿದರು.