


ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭಾ ಆಶೀರ್ವಾದಗಳೊಂದಿಗೆ, ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಫೆ.15ರಿಂದ 22 ರವರೆಗೆ ನಡೆಯಲಿದೆ.ಸರ್ಕಾರದಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ.ಸಂಸದ ನಳಿನ್ ಕುಮಾರ್ ಕಟೀಲ್ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.ವಿ.ಪ.ಶಾಸಕ ಹರೀಶ್ ಕುಮಾರ್ 10 ಲಕ್ಷ ರೂಪಾಯಿ ಹಾಗೂ ಭಕ್ತರು ದೊಡ್ಡ ಮೊತ್ತದಲ್ಲಿ ಅನುದಾನ ದೇವಸ್ಥಾನದ ಅಭಿವೃದ್ಧಿಗೆ ನೀಡಿದ್ದಾರೆ.ನಾ ಭುತೊ ನಾ ಭವಿಷ್ಯತಿ ಎಂಬ ಸಂಕಲ್ಪದೊಂದಿಗೆ ಬ್ರಹ್ಮಕಲಶೋತ್ಸವ ನಡೆಯಬೇಕು.ಗ್ರಾಮಸ್ಥರು-ಭಕ್ತರ ಸಹಕಾರದಿಂದ ತ್ವರಿತವಾಗಿ ಅಭಿವೃದ್ಧಿ ಕಾರ್ಯಗಳು ನಡೆದಿದೆ.ಅನ್ನದಾನ ಸೇವೆಗೆ ಸಾಕಷ್ಟು ಮಂದಿ ದೇಣಿಗೆ ನೀಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.10ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಕಲ್ಲಳಿಕೆ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತೇಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ ಸ್ವಾಗತಿಸಿ, ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಂದಿಸಿದರು.