Site icon Suddi Belthangady

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.8ರಿಂದ 11ರವರೆಗೆ ನಡೆಯಲಿದೆ.

ಫೆ.10 ರಂದು ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ 12.30ರಿಂದ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.ಸಂಜೆ 5ರಿಂದ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ 7ರಿಂದ ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭ್ರತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಕಸಬಾ ಮಲೆಬೆಟ್ಟು ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ, ರಾತ್ರಿ 8ರಿಂದ ಡಾ.ಶ್ರುತಿ ಕಾಂತಾಜೆ ಇವರಿಂದ ಭಕ್ತಿ ಭಾವ ಲಹರಿ, ರಾತ್ರಿ 12ರಿಂದ ಶ್ರೀ ಧರ್ಮದೈವಗಳ ನೇಮೋತ್ಸವ, ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮ ದೈವಗಳ ನೇಮೋತ್ಸವ ಫೆ.11 ರಂದು ಬೆಳಿಗ್ಗೆ 6ಕ್ಕೆ ಶ್ರೀ ಭಂಡಾರದ ನಿರ್ಗಮನ, ಸಂಪ್ರೋಕ್ಷಣೆ, ಪ್ರಸನ್ನ ಪೂಜೆ, ರಾತ್ರಿ 8 ರಿಂದ ಮೂಲಸ್ಥಾನ ಕಳೆಂಜ ಗುತ್ತು ದೈವಸ್ಥಾನದಲ್ಲಿ ಧರ್ಮದೈವ ವಾರಾಹಿ ನೇಮೋತ್ಸವ, ಕಲ್ಕುಡ, ಕಲ್ಲುರ್ಟಿ ಗುಳಿಗ ನೇಮೋತ್ಸವ, ಫೆ.12 ರಂದು ಶ್ರೀ ಕಲಶಾಭಿಷೇಕ, ಕಳೆಂಜದಲ್ಲಿ, ಪ್ರಸನ್ನ ಪೂಜೆ ಫೆ.13ರಂದು ಮಧ್ಯಾಹ್ನ 12 ರಿಂದ ದೇವಾಲಯದಲ್ಲಿ ಸಂಕ್ರಾಂತಿ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Exit mobile version