ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.
ಧರ್ಮಸ್ಥಳದ ಪಿಜತ್ತಡ್ಕ ನಿವಾಸಿಯಾಗಿರುವ 16 ವರ್ಷದ ವಿದ್ಯಾರ್ಥಿನಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಸೋಮವಾರ ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.
ತಂದೆ-ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.