


ಇಂದಬೆಟ್ಟು: ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಇವರ ಅಧ್ಯಕ್ಷತೆಯಲ್ಲಿ ಫೆ.12ರಂದು ಇಂದಬೆಟ್ಟು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ಸಹಾಯಕ ನಿರ್ದೇಶಕ ಜೋಸೆಫ್ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.


ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.ಗ್ರಾಮ ಪಂಚಾಯಿತ್ ಉಪಾಧ್ಯಕ್ಷರಾದ ಪ್ರೇಮ, ಗ್ರಾ.ಪ್ರಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಪಿ.ಡಿ.ಓ ರಶ್ಮಿ ವರದಿ ಜಮಾ- ಖರ್ಚಿನ ಬಗ್ಗೆ ಪ್ರಸ್ತಾಪಿಸಿ, ಗ್ರಾ.ಪಂ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.









