Site icon Suddi Belthangady

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ ನಿತ್ಯಶ್ರೀ ಗೆ ಸಮಾಧಾನಕರ ಪ್ರಶಸ್ತಿ

ಬಂದಾರು: ಫೆ.08, 09 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವುಗಳ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3ನೇ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾಳೆ.

ಇವರು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಮೋಹಿನಿ ದಂಪತಿಗಳ ಪುತ್ರಿಯಾಗಿರುತ್ತಾಳೆ.

Exit mobile version