ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ವಾರ್ಷಿಕ ಜಾತ್ರೆ ಸಂಪನ್ನ

0

ಉಜಿರೆ: ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರೆ ಫೆ.12 ರಂದು ಆಲಂಬಾಡಿ ಪದ್ಮನಾಭಾ ತಂತ್ರಿಯವರ ನೇತೃತ್ವದಲ್ಲಿ ಉಜಿರೆ ಶರತ್ ಕೃಷ್ಣ ಪಡುವೆಟನ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಗಣಪತಿ ಹೋಮ, ಬಿಂಬ ಶುದ್ಧಿ, ಪುಣ್ಯಾಹ ಕಲಶ, ಕಲಶ ಪೂಜೆ, ಕಲಶಾಭಿಷೇಕ, ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಸಿಯಾಳಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಕಾರ್ತಿಕ ಪೂಜೆ,ಮಧ್ಯಾಹ್ನ ಮಾಹಾ ಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅನ್ನದಾನ ಸೇವಾಕರ್ತರನ್ನು ಗೌರವಿಸಲಾಯಿತು.ಸಂಜೆ ಮಲೆಬೆಟ್ಟು ಶ್ರೀ ಮಹಾಗಣಪತಿ ಭಜನಾ ಮಂಡಳಿ, ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ, ಮಾಚಾರು ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯಿಂದ ಕುಣಿತ ಭಜನೆ, ಕಾಳರಾತ್ರಿ ದೈವದ ಪರ್ವ, ಭಂಡಾರ ಆಗಮನ, ರಾತ್ರಿ ಶ್ರೀ ಸುಬ್ರಹ್ಮಣ್ಯ ದೇವರ ಮತ್ತು ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ರಂಗ ಪೂಜೆ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.ಬಳಿಕ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ತುಳು ಹಾಸ್ಯಮಯ ನಾಟಕ “ಅಮ್ಮೆರ್” ಪ್ರದರ್ಶನಗೊಂಡಿತು.ಅನಂತರ ರಾತ್ರಿ ಕಾಳರಾತ್ರಿ ದೈವದ ನೇಮ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಅರ್ಚಕರು, ಊರವರು ಉಪಸ್ಥಿತರಿದ್ದು, ಸಹಕರಿಸಿದರು.

LEAVE A REPLY

Please enter your comment!
Please enter your name here