ಪುದುವೆಟ್ಟು ಗ್ರಾ.ಪಂ ದ್ವಿತೀಯ ಸುತ್ತಿನ ಗ್ರಾಮಸಭೆ

0

ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಎ.ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ನಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಹೇಮಲತಾ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ ಬಿ., ಗ್ರಾ.ಪ್ರಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಪಿ.ಡಿ.ಓ. ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವರದಿ‌ ಮಂಡಿಸಿದರು.ಪಂಚಾಯತ್ ಗುಮಾಸ್ತ ರವಿಶಂಕರ್ ಜಮಾ ಖರ್ಚು ಓದಿದರು.ಸಿಬ್ಬಂದಿಗಳು ಸಹಕರಿಸಿದರು‌.

LEAVE A REPLY

Please enter your comment!
Please enter your name here