ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಸಹಕಾರದೊಂದಿಗೆ ಸರ್ವಜ್ಞ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಫೆ.20ರಂದು ನಡೆಯಿತು.
ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಬೆಳ್ತಂಗಡಿ ಕುಲಾಲ ಕುಂಬಾರ ಯುವ ವೇದಿಕೆಯ ಅಧ್ಯಕ್ಷ ಉಮೇಶ್ ಕುಲಾಲ್, ನಿವೃತ್ತ ಕಂದಾಯ ನಿರೀಕ್ಷಕ ಪದ್ಮ ಕುಮಾರ್, ಪ.ಪಂ.ಮುಖ್ಯಾಧಿಕಾರಿ ರಾಜೇಶ್ ಕೆ., ಮುಖ್ಯ ಭಾಷಣಕಾರರಾಗಿ ಯುವ ವಕೀಲ ಉದಯ್ ಬಿ.ಕೆ.ಬಂದಾರು ಆಗಮಿಸಿದ್ದರು.
ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.
p>