ಶಿಬಾಜೆ ಗ್ರಾ.ಪಂ ದ್ವಿತೀಯ ಸುತ್ತಿನ ಗ್ರಾಮಸಭೆ

0

ಬೆಳ್ತಂಗಡಿ: ಶಿಬಾಜೆ ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ರತ್ನ.ಬಿ ಅಧ್ಯಕ್ಷತೆಯಲ್ಲಿ ಫೆ.20ರಂದು ರಾಜೀವ ಗಾಂಧಿ ಸೇವಾ ಕೇಂದ್ರ ಪೆರ್ಲ
ವಠಾರದಲ್ಲಿ ನಡೆಯಿತು.

ಗ್ರಾಮ ಸಭೆಯ ‌ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಕಂದಾಯ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಮೆಸ್ಕಾಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನಕರ್ ಎಮ್.ಜಿ, ರತೀಶ್.ಬಿ‌, ವಿನಯ್ ಚಂದ್ರ, ವನಿತಾ.ವಿ, ಯಮುನಾ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಪಿ.ಡಿ.ಓ ಜಯರಾಜ್.ಕೆ ಸ್ವಾಗತಿಸಿ, ವರದಿ ಮಂಡಿಸಿದರು.ಸಿಬ್ಬಂದಿಗಳು ಸಹಕರಿಸಿದರು‌.

LEAVE A REPLY

Please enter your comment!
Please enter your name here