ಪುಂಜಾಲಕಟ್ಟೆ: ಶಾಲಾ ಶಿಕ್ಷಣ ಇಲಾಖೆ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ಸಾಯಿಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣೆಯ ಬೆಳ್ತಂಗಡಿ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಫೆ.22ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು.
ಮಡಂತ್ಯಾರು ಗ್ರಾ. ಪಂ. ಅಧ್ಯಕ್ಷೆ ರೂಪ ನವೀನ್ ಉದ್ಘಾಟಿಸಿ, ಶುಭ ಹಾರೈಸಿದರು.ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಸರಿ ಅಧ್ಯಕ್ಷತೆ ವಹಿಸಿದ್ದರು.ಪಂಚಾಯತ್ ಸದಸ್ಯರಾದ ಪಾರ್ವತಿ, ವಿಶ್ವನಾಥ್, ಪುಷ್ಪ ಮೋಹನ್, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್ ಕುಮಾರ್, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಾಮಪ್ರಸಾದ್ ಸಂಪಿಗೆತ್ತಾಯ, ಗೋವರ್ಧನ ಬಾಳಿಗಾ, ಪದ್ಮನಾಭ ಸಾಲ್ಯಾನ್ ಕೊಂಕಡ್ಡ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಡ್ವರ್ಡ್ ಡಿಸೋಜಾ, ಗುರುವಾಯನಕೆರೆ ಸಿ ಆರ್ ಪಿ ರಾಜೇಶ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಜಯರಾಮ ಶೆಟ್ಟಿ, ದಿವಾಕರ್ ಶೆಟ್ಟಿ, ಮನೋಹರ್, ಹರಿಪ್ರಸಾದ್, ಸುಮಿತ್ರ, ಚೇತನ, ಶಮಿಮಾಬಾನು, ತಾಯಂದಿರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಶೆಟ್ಟಿ ಬಿ ಸ್ವಾಗತಿಸಿದರು.ವಿದ್ಯಾರ್ಥಿಗಳಾದ ಅಲೀನ ಅನಿಸ್ ಮತ್ತು ಅಮೋಘ ವರ್ಷ ರಾಗಿ, ಮಾಲ್ಟ್ ನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶಿಲ್ಪ ಕೆಎಲ್ ವಂದಿಸಿದರು.