Site icon Suddi Belthangady

ಮುಂಡಾಜೆ ಗ್ರಾ.ಪಂ ದ್ವಿತೀಯ ಸುತ್ತಿನ ಗ್ರಾಮಸಭೆ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯಲ್ಲಿ ಫೆ.23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಚಿದಾನಂದ ಹೂಗಾರ್ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತ್ ಉಪಾಧ್ಯಕ್ಷೆ ಸುಮಲತಾ, ಗ್ರಾ.ಪ್ರಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ನಾಡಗೀತೆ ಹಾಡಿ, ಗ್ರಾ.ಪಂ ಪಿ.ಡಿ.ಓ. ಗಾಯತ್ರಿ.ಪಿ ವರದಿ ಮಂಡಿಸಿ, ಜಮಾ-ಖರ್ಚಿನ ಬಗ್ಗೆ ಓದಿ ಕಾರ್ಯಕ್ರಮವನ್ನು ನಿರೂಪಿಸಿದರು.ಗ್ರಾ.‌ಪಂ ಸದಸ್ಯೆ ರಂಜಿನಿ ಸ್ವಾಗತಿಸಿದರು, ಸಿಬ್ಬಂದಿಗಳು ಸಹಕರಿಸಿದರು‌.

Exit mobile version