ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಇಂದು(ಫೆ.23ರಂದು) ಶಾಲೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸುವ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು.
ಈ ಆರೋಗ್ಯ ತಪಾಸಣಾ ಶಿಬಿರದ ಉಪಯೋಗವನ್ನು ಪೋಷಕರು ಹಾಗೂ ಶಿಕ್ಷಕರು ಪಡೆದುಕೊಂಡರು.
ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದ ಮೇರೆಗೆ ಪ್ರಮೀಳ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಕಾರ್ಯಕ್ರಮವನ್ನು ಆಯೋಜಿಸಿದರು.ಶಿಕ್ಷಕ ಮಂಜುನಾಥ್ ಸಹಕರಿಸಿದರು.