ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನ ಸಭೆಯನ್ನು ಫೆ. 23ರಂದು ನಡೆಸಲಾಯಿತು.
ಎಲ್ಲಾ ವಿಷಯವಾರು ಶಿಕ್ಷಕರು ಸಭೆ ಯಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಕಲಿಕಾ ಬಲ ವರ್ಧನೆಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.
ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಾಲಾ ಮುಖ್ಯೋಪಾಧ್ಯಾಯ ಪದ್ಮರಾಜ್.ಎನ್ ಕಲಿಕೆ ಮಟ್ಟದ ಸುಧಾರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.