Site icon Suddi Belthangady

ಮುಂಡತೋಡಿ ಸ.ಹಿ.ಪ್ರಾ ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ

ಉಜಿರೆ: ಇಲ್ಲಿಯ ಪೆರ್ಲ ಮುಂಡತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.24ರಂದು ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸಿ.ಕೆ.ಚಂದ್ರಕಲಾ ಉದ್ಘಾಟಿಸಿದರು.

ಉಜಿರೆ ಗ್ರಾಮ ಪಂಚಾಯಿತ್ ಸದಸ್ಯೆ ಲಲಿತಾ, ಎಸ್.ಡಿ.ಎಂ.ಸಿ ಅದ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಸದಸ್ಯೆ ಅನುಪಮ ಹಾಗೂ ಪೋಷಕರು, ಊರ ವಿದ್ಯಾಭಿಮಾನಿಗಳು, ಶಾಲೆಯ ಅಧ್ಯಾಪಕ ವೃಂದ, ಮಕ್ಕಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಸೇವಂತಿ ಬಿ. ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Exit mobile version