ಶ್ರೀ ಧ.ಮಂ ಶಿಕ್ಷಕರ ತರಬೇತಿ ಸಂಸ್ಥೆ(ಡಿ.ಇಎಲ್.ಇಡಿ)ಯಲ್ಲಿ ಸಾಂಪ್ರದಾಯಿಕ ದಿನಾಚರಣೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ(ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಸಾಂಪ್ರದಾಯಿಕ (ETHNIC) ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಮಾತನಾಡುತ್ತಾ ಸಾಂಪ್ರದಾಯಿಕ ದಿನಾಚರಣೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ.ನಮ್ಮ ದೇಶದ ಸಂಪ್ರದಾಯ ವಿಶಿಷ್ಟವಾದದ್ದು.ಭಾರತೀಯ ಭವ್ಯ ಸಂಸ್ಕೃತಿಯನ್ನು ಇಂದಿನ ಜನಾಂಗ ಮರೆಯದೆ ಮತ್ತು ಪಾಶ್ಚ್ಯಾತ್ಯ ಜೀವನ ಶೈಲಿಗೆ ಹೆಚ್ಚು ಒತ್ತು ನೀಡದೆ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕೆಂದು ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿ ಮಾತನಾಡುತ್ತಾ ಭಾರತ ದೇಶ ವಿವಿಧ ಭಾಷೆ, ಧರ್ಮ, ಆಚಾರ- ವಿಚಾರ ಹಾಗೂ ಉಡುಗೆ- ತೊಡುಗೆಗಳನ್ನು ಒಳಗೊಂಡ ತವರೂರು.ಇದು ಜಗತ್ತಿನ ಯಾವ ಭಾಗದಲ್ಲೂ ಕಂಡು ಬರುವುದಿಲ್ಲ ಇಂತಹ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ ವಹಿಸಿ, ಇಂದಿನ ಆಧುನಿಕ ಯುಗದಲ್ಲಿ ಇಂತಹ ಆಚರಣೆಯನ್ನು ಮಾಡುವುದು ನಮ್ಮ ಸಂಸ್ಕೃತಿಯ ಪ್ರತಿಬಿಂಬ.ಮಾನವೀಯ ಮೌಲ್ಯಗಳಿಗೆ ಬೆಲೆ ಕೊಟ್ಟು ಜೀವನವನ್ನು ನಡೆಸಿದರೆ ಈ ಆಚರಣೆಗೆ ಅರ್ಥ ಬರುತ್ತದೆ ಎಂದರು.

ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯದ ಸಂಸ್ಕೃತಿ ಬಿಂಬಿಸುವ ಉಡುಗೆಗಳನ್ನು ತೊಟ್ಟು ಗಮನ ಸೆಳೆದು ಉತ್ಸಾಹದಿಂದ ಭಾಗವಹಿಸಿ ಭಾರತೀಯ ಸಂಸ್ಕೃತಿ, ಸಂಪ್ರದಾಯವನ್ನು ಅನಾವರಣಗೊಳಿಸಿದರು.

ಉಪನ್ಯಾಸಕರಾದ ಮಂಜು ಆರ್, ಅನುಷಾ ಡಿ.ಜೆ ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಆರತಿ ಪ್ರಾರ್ಥಿಸಿ, ಸುರಕ್ಷಾ ಸ್ವಾಗತಿಸಿ, ಜಲಜಾಕ್ಷಿ ವಂದಿಸಿ, ನಿಶಾ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here