ವೇಣೂರು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಧಾರ್ಮಿಕ ಸಭೆ- ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡ್ ಬಿಡುಗಡೆ

0

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಐದನೇ ದಿನ ಫೆ.26ರಂದು ಭರತೇಶ ಸಮುದಾಯ ಭವನದಲ್ಲಿ ಧಾರ್ಮಿಕ ಸಭೆ ನಡೆಯಿತು.ಕಾರ್ಯಕ್ರಮ ಪರಮ ಪೂಜ್ಯ 108 ಶ್ರೀ ಅಮೋಘಕೀರ್ತಿ ಮತ್ತು ಪರಮ ಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಮೂಡಬಿದ್ರೆ ಜೈನ್ ಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾ ಸ್ವಾಮೀಜಿ, ಮಾತಾಜಿಯವರ ಉಪಸ್ಥಿತಿಯಲ್ಲಿ ನಡೆಯಿತು.ಮೈಸೂರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆ ವಹಿಸಿ ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡ್ ಬಿಡುಗಡೆ ಗೊಳಿಸಿದರು.

ಸ್ಥಾಪಕ ವಂಶಿಯ ಅರಸರು ಮತ್ತು ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲರು, ಅಂಚೆ ಇಲಾಖೆಯ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್,ಮಾಜಿ ಸಚಿವ ಅಭಯಚಂದ್ರ ಜೈನ್ ಮೂಡಬಿದ್ರೆ, ಉಪಸ್ಥಿತರಿದ್ದರು.

ಡಾ.ಬಿ.ಪಿ ನ್ಯಾಮಗೌಡ ವಿಶೇಷ ಉಪನ್ಯಾಸ ನೀಡಿದರು.ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ, ಈ ದಿನದ ಸೇವಾ ಕರ್ತರಾದ ಮೂಡಬಿದ್ರೆ ಎಕ್ಷೆಲೆಂಟ್ ಸಂಸ್ಥೆಯ ಯುವರಾಜ್ ಜೈನ್, ರಶ್ಮಿತಾ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂಡಬಿದ್ರೆ ಎಕ್ಸಲೆಂಟ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಬಿ.ಪಿ.ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆ ಹಾಗೂ ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

p>

LEAVE A REPLY

Please enter your comment!
Please enter your name here