Site icon Suddi Belthangady

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ ಶಾಲೆಯಲ್ಲಿ ಆಹಾರ ಮೇಳ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.24ರಂದು ಆಹಾರ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.

ಈ ಆಹಾರ ಮೇಳವನ್ನು ಪುದುವೆಟ್ಟು ಗ್ರಾಮ ಪಂಚಾಯಿತಿಯ ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡ ರವರು ಆಹಾರ ಮೇಳಕ್ಕೆ ಚಾಲನೆಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ, ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಿಕ್ಕ ಸಾಹೇಬ್, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯಶವಂತ ಗೌಡರವರು ಇಂತಹ ಆಹಾರ ಮೇಳವನ್ನು ಆಯೋಜನೆ ಮಾಡುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರದ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದಂತಾಗುತ್ತದೆ ಎಂದು ತಿಳಿಸಿದರು.ನಂತರ ಮಾತನಾಡಿದ ಪುದುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಮಾತನಾಡಿ ವಿದ್ಯಾರ್ಥಿಗಳಿಗೆ ಹೊರಗಿನ ಪ್ರಪಂಚದ ವ್ಯವಹಾರದ ಅರಿವು ತಿಳಿಯಬೇಕಾದರೆ ಇಂತಹ ಆಹಾರ ಮೇಳಗಳು ತುಂಬಾ ಮುಖ್ಯ ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಪುದುವೆಟ್ಟು ಶಾಲೆಯಲ್ಲಿ ಇಂತಹ ವಿನೂತನ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಹಾರಮೇಳದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಆಹಾರ ಮೇಳದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಮತ್ತು ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿ ಪೋಷಕರು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳನ್ನು ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ಸ್ವಾಗತಿಸಿ, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಧನ್ಯವಾದ ಸಲ್ಲಿಸಿದರು.ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದರು.

Exit mobile version