Site icon Suddi Belthangady

ಸಿದ್ದಬೈಲು ಪರಾರಿ ಸ.ಹಿ.ಪ್ರಾ ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಲ್ಮಂಜ: ಸಿದ್ದಬೈಲು ಪರಾರಿ ಸರಕಾರಿ ಹಿ.ಪ್ರಾ.ಶಾಲೆ, ರೋಟರಿ ಸಮುದಾಯ ದಳ ಕಲ್ಮಂಜ, ಶಾಲಾಭಿವೃದ್ಧಿ‌ ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಭಾಗಿತ್ವದಲ್ಲಿ ಫೆ.26ರಂದು ಸಿದ್ದಬೈಲು ಪರಾರಿ ಸ.ಹಿ.ಪ್ರಾ ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು.

ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಸಮುದಾಯ ದಳ ಕಲ್ಮಂಜದ ಅಧ್ಯಕ್ಷರು ಸತೀಶ್ ಭಟ್, ಕಲ್ಮಂಜ ಗ್ರಾಮ ಪಂಚಾಯತಿ ಸದಸ್ಯರಾದ ಪ್ರವೀಣ್ ಗೌಡ ಕರಿಯನೆಲ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಧರ್ಣಮ್ಮ, ರೋಟರಿ ಸಮುದಾಯ‌ ದಳ ಕಲ್ಮಂಜ‌ ಸದಸ್ಯರಾದ ಜಯಂತ್ ರಾವ್ ಕಲ್ಮಂಜ‌, ಮೇಜರ್ ಜನರಲ್ M.V ಭಟ್ ಮುಂಡಾಜೆ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿದ್ಯಾ, ರಾಘವ ಕಲ್ಮಂಜ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.

Exit mobile version