ಉಜಿರೆ: ಉಜಿರೆಯ ಎಸ್.ಡಿ.ಎಮ್ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಬಿ.ವೊಕ್ ಡಿಜಿಟಲ್ ಮೀಡಿಯಾ-ಫಿಲ್ಮ್ ಮೇಕಿಂಗ್ ವಿಭಾಗಗಳ ಸಹಭಾಗಿತ್ವದಲ್ಲಿ ‘ಮಾಧ್ಯಮ, ಸಂಸ್ಕೃತಿ, ಮತ್ತು ತಂತ್ರಜ್ಞಾನ: ಸಾಮಾಜಿಕ-ರಾಜಕೀಯ ಸಂರಚನಾತ್ಮಕ ನೋಟ’ ಕುರಿತು ಮಾರ್ಚ್ 1 ಮತ್ತು 2ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಮಾಧ್ಯಮೋತ್ಸವ ನಡೆಯಲಿದೆ.
ಸ್.ಡಿ.ಎಮ್ ಕಾಲೇಜಿನ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ‘ಸುವರ್ಣ ನ್ಯೂಸ್’ ಸಂಪಾದಕ ಅಜಿತ್ ಹನುಮಕ್ಕನವರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ ರವಿ ಆಶಯ ಭಾಷಣ ಪ್ರಸ್ತುತ ಪಡಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಆಸ್ಸಾಂನ ಸಿಲ್ಚಾರ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯ ಮಾಜಿ ಉಪಕುಲಪತಿ ಪ್ರೊ.ಕೆ.ವಿ ನಾಗರಾಜ್ ಮತ್ತು ಎಸ್.ಡಿ.ಎಮ್ ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಪಿ ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ನ್ಯೂಸ್ 18 ಕನ್ನಡದ ಮಾಜಿ ಸಂಪಾದಕ ನಿಖಿಲ್ ಜೋಶಿ ಸಮಾರೋಪ ಭಾಷಣ ಪ್ರಸ್ತುತಪಡಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ಎಸ್.ಡಿ.ಎಮ್ ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್.ಟಿ ಮತ್ತು ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ಕ್ರೈಮ್ ರಿಪೋರ್ಟರ್ ಸುನೀಲ್ ಧರ್ಮಸ್ಥಳ ಉಪಸ್ಥಿತರಿರುತ್ತಾರೆ.
ಮಾಧ್ಯಮೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಸುದ್ದಿ ಬರವಣಿಗೆ, ಡಿಜಿಟಲ್ ಪೋಸ್ಟರ್ ಮೇಕಿಂಗ್, ರೀಲ್ಸ್ ಮೇಕಿಂಗ್, ರೇಡಿಯೋ ಜಾಕಿ, ಫೋಟೋಗ್ರಫಿ, ಕಿರುಚಿತ್ರ ನಿರ್ಮಾಣ, ಲೈವ್ ನ್ಯೂಸ್ ಬುಲೆಟಿನ್, ಸಿನಿಮಾ ರಸಪ್ರಶ್ನೆ, ಸೋಷಿಯಲ್ ಮೀಡಿಯಾ ಮ್ಯಾನೇಜಿಂಗ್ ಮತ್ತು ಸಮೂಹ ನೃತ್ಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ನಡೆಯಲಿವೆ.ವಿವಿಧ ಕಾಲೇಜುಗಳಿಂದ 200ಕ್ಕೂ ಅಧಿಕ ವಿದ್ಯಾರ್ಥಿ ಪ್ರತಿನಿಧಿಗಳು ಈ ವಿಚಾರ ಸಂಕಿರಣದಲ್ಲಿ ಭಾಗವಹಿಲಿಸದ್ದಾರೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ, ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ.ಹಂಪೇಶ್ ಕೆ.ಎಸ್, ತಿಳಿಸಿದ್ದಾರೆ.
ವಿಚಾರ ಸಂಕಿರಣದ ಭಾಗವಾಗಿ ಮೂರು ವಿಚಾರಗೋಷ್ಠಿಗಳು ಮತ್ತು ನಾಲ್ಕು ಸಂಶೋಧನಾ ಪ್ರಬಂಧ ಮಂಡನೆಯ ಗೋಷ್ಠಿಗಳು ಏರ್ಪಡಲಿವೆ. ಮೊದಲ ದಿನದ ಮೊದಲ ಸಂಶೋಧನಾ ಗೋಷ್ಠಿಯ ಅಧ್ಯಕ್ಷತೆಯನ್ನು ಆಸ್ಸಾಂನ ಸಿಲ್ಚಾರ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯ ಮಾಜಿ ಉಪಕುಲಪತಿ ಪ್ರೊ.ಕೆ.ವಿ ನಾಗರಾಜ್ ಮತ್ತು ಎರಡನೇ ಸಂಶೋಧನಾ ಗೋಷ್ಠಿಯ ಅಧ್ಯಕ್ಷತೆಯನ್ನು ಕುವೆಂಪು ವಿಶ್ವವಿದ್ಯಾನಿಲಯದ ಉಪನ್ಯಾಸಕ ಡಾ.ಸತೀಶ್ ಕುಮಾರ್ ವಹಿಸಲಿದ್ದಾರೆ.