ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆರನೇ ದಿನ ಫೆ.27ರಂದು ಭರತೇಶ ಸಮುದಾಯ ಭವನದಲ್ಲಿ ಧಾರ್ಮಿಕ ಸಭೆ ನಡೆಯಿತು.
ಕಾರ್ಯಕ್ರಮ ಪರಮ ಪೂಜ್ಯ 108 ಶ್ರೀ ಅಮೋಘಕೀರ್ತಿ ಮತ್ತು ಪರಮ ಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಮೂಡಬಿದ್ರೆ ಜೈನ್ ಮಠದ ಡಾ.ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾ ಸ್ವಾಮೀಜಿ, ಮಾತಾಜಿಯವರ ಉಪಸ್ಥಿತಿಯಲ್ಲಿ ನಡೆಯಿತು.ಕರ್ನಾಟಕ ಸರಕಾರದ ಮಾಜಿ ಮುಖ್ಯ ಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸುದ್ದಿ ಬಿಡುಗಡೆ ಹೊರ ತಂದಿರುವ ವಿಶೇಷ ಸಂಚಿಕೆ ‘ತ್ಯಾಗ ವೀರ ಭಗವಾನ್ ಬಾಹುಬಲಿ’ ಮಹಾಮಸ್ತಕಾಭಿಷೇಕ-2024 ವನ್ನು ಗಣ್ಯರು ಬಿಡುಗಡೆಗೊಳಿಸಿದರು.
ಸ್ಥಾಪಕ ವಂಶಿಯ ಅರಸರು ಮತ್ತು ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮೂಡಬಿದ್ರೆ ಸರ್ವಿಸ್ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಎಂ. ಉಪಸ್ಥಿತರಿದ್ದರು.
ಡಾ.ಶಾಂತಿನಾಥ ದಿಬ್ಬಣ ಧಾರವಾಡ ವಿಶೇಷ ಉಪನ್ಯಾಸ ನೀಡಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ, ಈ ದಿನದ ಸೇವಾಕರ್ತರಾದ ಮರೋಡಿಯ ಕೆ.ಹೇಮರಾಜ್ ಬೆಳ್ಳಿಬೀಡು ಜೈನ್ ಸ್ವಾಗತಿಸಿದರು.ಮಹಾವೀರ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿದರು.ಪ್ರೊ.ಸ್ಮಿತೇಶ್ ಪತ್ರಾವಳಿ ಧಾರವಾಡ ವಂದಿಸಿದರು.
ಬೆಳಿಗ್ಗೆ ಹಾಗೂ ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಬಾಹುಬಲಿ ಮೂರ್ತಿಗೆ ಕಲಶಾಭಿಷೇಕ ಜರಗಿತು.