ಪುದುವೆಟ್ಟು ಗ್ರಾ.ಪಂ.ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

0

ಪುದುವೆಟ್ಟು: ಫೆ.28ರಂದು ಪುದುವೆಟ್ಟು ಗ್ರಾಮದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪುದುವೆಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಯತ್ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಂದಿನ ಸಭೆಯ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ ಹಾಗೂ ಹಾಗೂ ಪಂಚಾಯತ್ ನ ಗೌರವಾನ್ವಿತ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರವಿ.ಎನ್.ಬಿ ಇವರು ಉಪಸ್ಥಿತರಿದ್ದರು.

ಇಂದಿನ ಗ್ರಾಮಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಿವಿಧೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜ ಉಪಸ್ಥಿತರಿದ್ದು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.ಈ ಸಭೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಇವರು ಉಪಸ್ಥಿತರಾಗಿದ್ದರು.ಇಂದಿನ ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ ಶಮೀಮ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶಮೀಮ ಇವರು ಧನ್ಯವಾದವನ್ನು ಸಮರ್ಪಿಸಿದರು ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

LEAVE A REPLY

Please enter your comment!
Please enter your name here