Site icon Suddi Belthangady

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ, ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುದುವೆಟ್ಟು: ಫೆ.28ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ನೆರಿಯ ವಲಯದ ಪಶುವೈದ್ಯಾಧಿಕಾರಿ ಹಾಗೂ ಉಜಿರೆ ಪಂಚಾಯತ್ ನ ಆಡಳಿತ ಅಧಿಕಾರಿ ಡಾ.ಯತೀಶ್ ಗೌಡ ಮಠ ಇವರು ಶಾಲೆಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ತಮ್ಮ ದಿವ್ಯ ಹಸ್ತದಿಂದ ಉದ್ಘಾಟನೆಗೊಳಿಸಿದರು.

ಉದ್ಘಾಟನೆಗೊಳಿಸಿ ಮಾತನಾಡಿದ ಡಾ.ಯತೀಶ್ ಗೌಡ ಮಠ ಇವರು ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಬಹಳಷ್ಟು ಮುಂದುವರೆದಿದೆ, ಹಿಂದಿನ ಕಾಲದಲ್ಲಿ ಎಷ್ಟು ಕಷ್ಟಕರ ಕೆಲಸಗಳನ್ನು ಇವಾಗಿನ ವಿಜ್ಞಾನ ಬಹಳಷ್ಟು ಸುಲಭವಾಗಿ ಮಾಡುವಂತೆ ಮುಂದುವರೆದಿದೆ, ಈ ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಕಂಡು ತುಂಬಾನೇ ಸಂತೋಷವಾಯಿತು, ಇದರ ಮುಂದುವರಿದ ಭಾಗವಾಗಿ ನೀವು ತಯಾರಿಸಿದ ಮಾದರಿಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.ಹೊಸ ಹೊಸ ಆವಿಷ್ಕಾರಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡು ಮುನ್ನುಗ್ಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗೆಗಿನ ಆಸಕ್ತಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಬೇಕು, ವಿಜ್ಞಾನದಿಂದ ಯಾವುದನ್ನು ಬೇಕಾದರೂ ಸಾಧಿಸಬಹುದು ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲೆಯ ವಿಜ್ಞಾನ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು,ಶಾಲಾ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ಸುಮಾರು 25ಕ್ಕೂ ಹೆಚ್ಚು ವಿವಿಧ ಬಗೆಯ ವಿಜ್ಞಾನ ಮಾದರಿಗಳನ್ನು ಪ್ರದರ್ಶನಕ್ಕೀಡಲಾಯಿತು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಸ್ವಾಗತಿಸಿ, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲೆಯ ವಿಜ್ಞಾನ ಶಿಕ್ಷಕ ಪವನ್ ಕುಮಾರ್ ರವರು ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Exit mobile version