ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಶಾಲಾ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.ದಿನನಿತ್ಯದ ಬದುಕಿನಲ್ಲಿ ವಿಜ್ಞಾನದ ಪಾತ್ರವನ್ನು ಮತ್ತು ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳು ಹಾಡು, ನೃತ್ಯ , ನಟನೆ ಹಾಗೂ ಪ್ರಯೋಗಗಳ ಮೂಲಕ ಪ್ರದರ್ಶಿಸಿದರು.ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಿದ ವಿಜ್ಞಾನಿಗಳನ್ನು ಸ್ಮರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸಿಕೊಂಡು ವಿಜ್ಞಾನದಲ್ಲಿ ಆಸಕ್ತಿಯನ್ನು ಹೊಂದಿ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೈಯಬೇಕೆಂದು ನುಡಿದು ಶುಭ ಹಾರೈಸಿದರು.
ವಿದ್ಯಾರ್ಥಿಗಳಾದ ಗೌರೀಶ್(9ನೇ) ಸ್ವಾಗತಿಸಿ, ಮನ್ವಿತಾ (9ನೇ) ವಂದಿಸಿ, ಲವಿಶಾ ಡಿಕೋಸ್ತ (9ನೇ) ಕಾರ್ಯಕ್ರಮ ನಿರ್ವಹಿಸಿದರು.ಸಹಶಿಕ್ಷಕಿಯರಾದ ಪ್ರೀತ ಡಿಸೋಜ ಮತ್ತು ಮೇರಿ ಸುಜಾ ಸಹಕರಿಸಿದರು.
p>