ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.29ರಂದು ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿ ತಾರಕೇಶ್ವರಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.
ಈ ಗ್ರಾಮ ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು, ತಾಂತ್ರಿಕ ವಿಭಾಗದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಫಲಾನುಭವಿಗಳು ಹಾಗೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಸ್ವಾಗತಿಸಿದರು, ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.