ನಿಡ್ಲೆ: ವಿಕಲಚೇತನರ ವಿಶೇಷ ಗ್ರಾಮ ಸಭೆ

0

ನಿಡ್ಲೆ: ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ಯಾಮಲ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಗ್ರಾಮ ಪಂಚಾಯಿತ್ ನ ಸದಸ್ಯರಾದ ಹೇಮಾವತಿ.ಕೆ, ಮೋಹನ್ ಪೂಜಾರಿ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಪುನರ್ ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜಾ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ನಿಡ್ಲೆ ಸಮುದಾಯ ಆರೋಗ್ಯ ಕೇಂದ್ರ ಸಮುದಾಯ ಅಧಿಕಾರಿ ವಿನುತಾ ರವರು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆ ಹೇಮಲತಾ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಈ ಗ್ರಾಮ ಸಭೆಯಲ್ಲಿ ಒಟ್ಟು ಆರು ಜನ ವಿಕಲ ಚೇತನ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯಿತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ದೀಪಕ್ ರಾಜ್.ಎಂ ಸ್ವಾಗತಿಸಿ, ಕಾರ್ಯದರ್ಶಿ ಕೆ.ಪಿ.ಕೇಶವ ಗೌಡ ನಿರೂಪಿಸಿದರು.

p>

LEAVE A REPLY

Please enter your comment!
Please enter your name here