ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ಇಂದು(ಫೆ.29ರಂದು) ನಡೆಯಿತು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಮಕ್ಕಳು ನಾಡಗೀತೆ ಹಾಡಿದರು ವಿಕಲಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಾಲೂಕು ಪಂಚಾಯಿತಿ MRF ಜಾನ್ ಬ್ಯಾಟ್ಟಿಸ್ಟ್ ಡಿಸೋಜ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳು ಹಾಗೂ ಅನುದಾನದ ಬಗ್ಗೆ ಪಿಡಿಒ ರಶ್ಮಿ ರವರು ಮಾಹಿತಿ ನೀಡಿದರು.
ವಿಕಲಚೇತನರ ಬೇಡಿಕೆಗಳನ್ನು ಗ್ರಾಮ ಸಭೆಯಲ್ಲಿ ಆಲಿಸಲಾಯಿತು.ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಸುಮಿತ್ರಾ, VRM ಈರಣ್ಣ, ವಿಪುಲ್, VKM ಆಸೀಫ್, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ವಿಕಲಚೇತನರು ಹಾಗೂ ಅವರ ಪೋಷಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಪುನರ್ವಸತಿ ಕಾರ್ಯಕರ್ತ ಎಂ.ಜೆ. ಜೋಸೆಪ್ ರವರು ಸ್ವಾಗತಿಸಿ ವರದಿ ಸಲ್ಲಿಸಿದರು.ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.